
ಹುಮ್ನಾಬಾದ್ ಜು.10- 2020-21ನೇ ಸಾಲಿನ SSLC ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಮನಾಬಾದ, ಕ. ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಹುಮನಾಬಾದ, ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಬೀದರ ಹಾಗೂ ತಾಲೂಕಾ ಘಟಕ ಹುಮನಾಬಾದ ಸಹಯೋಗದಲ್ಲಿ ದಿನಾಂಕ 10-07-2021ರಂದು ಆಯೋಜಿಸಲಾಯಿತು.. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶಿವಗುಂಡಪ್ಪನವರು ವಹಿಸಿ ತಾಲೂಕಿನ ಎಲ್ಲಾ ಎಸ್ಸೆಸೆಲ್ಸಿ ಮಕ್ಕಳಿಗೆ ಹೊಸ ಪರೀಕ್ಷಾ ವಿಧಾನದ ಕುರಿತು ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದ್ದು ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಮಕ್ಕಳು ಕೇಳುವ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಬೇಕೆಂದು ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಸಾರಿಕಾ ಗಂಗಾ ಪ್ರಸ್ತಾವಿಕ ಮಾತನಾಡಿ, ಕೋವಿಡ್ 19 ಸಂದರ್ಭದಲ್ಲಿ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದು ಅವರಿಗೆ ಪರೀಕ್ಷಾ ವಿಧಾನ ಕುರಿತು ಜಾಗೃತಿ ಮೂಡಿಸುವುದು ಅವಶ್ಯವೆಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶ್ರೀ ಲೋಕೇಶ ಶಿಕ್ಷಣ ಸಂಯೋಜಕರು, ಶ್ರೀ ಪರಮೇಶ್ವರ ಉಪ ಪ್ರಾಂಶುಪಾಲರು , ಶ್ರೀ ಶೇಕ್ ಮೆಹಬೂಬ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಹುಮನಾಬಾದ ಹಾಗೂ ಸುನಿತಾ ಪಾಟೀಲ ತಾಲೂಕ ಅಧ್ಯಕ್ಷರು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹುಮನಾಬಾದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉರ್ದು ಮಧ್ಯಮ ಹಾಗೂ ಕನ್ನಡ ಮಾಧ್ಯಮದ ಒಟ್ಟು 24 ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಭುವನೇಶ್ವರಿ ನೆರವೇರಿಸಿದರು..

